ಬಸ್ಸಿಗೆ ಕಲ್ಲು ತೂರಿದ ಮೂವರ ಬಂಧನ

Picture of RB NEWS

RB NEWS

Bureau Report

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲೆಸದ ಪ್ರಕರಣ ಸಂಬಂಧ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋ‌ರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್‌ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಕಿಡಿಗೇಡಿಗಳು ಬಸ್ಸಿಗೆ ಕಲ್ಲೆಸದು ಹಾನಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲೆಸದ ಪ್ರಕರಣ ಸಂಬಂಧ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋ‌ರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್‌ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಕಿಡಿಗೇಡಿಗಳು ಬಸ್ಸಿಗೆ ಕಲ್ಲೆಸದು ಹಾನಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top