

ಬಸ್ ತಡೆದು ಲಾಂಗ್ನಿಂದ ದಾಂಧಲೆ ನಡೆಸಿದ ರೌಡಿಗೆ ಗುಂಡೇಟು!




ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನು (23)ನನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸನ್ನು ತಡೆದು ಲಾಂಗ್ನಿಂದ ದಾಂಧಲೆ ನಡೆಸಿ ಕಿಟಕಿಯ ಗಾಜುಗಳನ್ನು ಪುಡಿಗೈದು ಅಟ್ಟಹಾಸ ಮೆರೆದಿದ್ದ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.
ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.

ಅದೇ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್ಪೆಕ್ಟರ್ ಮೋಹನ್ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಮನುವಿನ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್ಇನ್ಸ್ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.








































