ಬಾಲಕನ ಬರ್ಬರ ಹತ್ಯೆ: ಆರೋಪಿಗಳಿಬ್ಬರಿಗೆ ಗುಂಡೇಟು

Picture of RB NEWS

RB NEWS

Bureau Report

ಬಾಲಕನ ಬರ್ಬರ ಹತ್ಯೆ: ಆರೋಪಿಗಳಿಬ್ಬರಿಗೆ ಗುಂಡೇಟು

ಬೆಂಗಳೂರು : ಬಾಲಕನೊಬ್ಬನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.

ದುಷ್ಕರ್ಮಿಗಳಿಂದ ಬಲಿಯಾದ ನಿಶ್ಚಿತ್

ಘಟನೆ ನಡೆದಿದ್ದ ಸ್ಥಳದಲ್ಲಿ ತನಿಖೆ ಕೈಗೊಂಡ ಪೊಲೀಸರು

ಮೃತ ಬಾಲಕನ್ನು ನಿಶ್ಚಿತ್ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬವರ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲಿಸರು ಯಶಸ್ವಿಯಾಗಿದ್ದಾರೆ.

ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಕಗ್ಗಲಿಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್‌ಪೆಕ್ಟ‌ರ್ ಕುಮಾರಸ್ವಾಮಿ ಹಾಗೂ ಪಿಎಸ್‌ಐ ಅರವಿಂದ್ ಕುಮಾ‌ರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ.

ಸದ್ಯ ಬಂಧಿತ ಆರೋಪಿಗಳನ್ನು ಜಯನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹುಳಿಮಾವು ಠಾಣೆಗೆ ಪೋಷಕರು ಈ ಸಂಬಂಧ ಮಾಹಿತಿ ನೀಡಿದ್ದರು. ಒಂದೆಡೆ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು. ಮತ್ತೊಂದೆಡೆ ಪೋಷಕರು, ಆರೋಪಿಗಳಿಗೆ 5 ಲಕ್ಷ ನೀಡಿ ಮಗನನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ್ನು ಆರೋಪಿಗಳು ಕಗ್ಗಲಿಪುರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಕೊಯ್ದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ಗುರುವಾರ ಸಂಜೆ ಜಾನುವಾರುಗಳನ್ನು ಮನೆಗೆ ಕರೆತರಲು ಕಾಡಿಗೆ ಹೋಗಿದ್ದ ವ್ಯಕ್ತಿಯೊಬ್ಬರು ಬಂಡೆಯ ಮೇಲೆ ಸುಟ್ಟ ಸ್ಥಿತಿಯಲ್ಲಿ ಬಾಲಕನ ಮೃತದೇಹವನ್ನು ಕಂಡು ಪೊಲೀಸರಿಗೆ ಮಹಿತಿ ನೀಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top