








ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
ಉಡುಪಿ : ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.
ಈ ಪ್ರಕರಣದಲ್ಲಿ ಆರೋಪಿತನು ಅಪರಿಚಿತನಾಗಿದ್ದರಿಂದ, ಆರೋಪಿತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.
ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜ.26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.










































