ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ : ಆರೋಪಿ ಪೊಲೀಸರ ಬಲೆಗೆ
ಮಂಗಳೂರು : ಜೋಕಟ್ಟೆಯಲ್ಲಿ ಬೆಳಗಾವಿಯ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಮಧ್ಯವಯಸ್ಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಆ.6 ರಂದು ಬೆಳಿಗ್ಗೆ 10:30 ರ ಸುಮಾರಿಗೆ ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್, ಪರಸಗಡದ ಮಾದರ ಓಣಿಯವರಾಗಿದ್ದು,ಫಕೀರಪ್ಪ ಹಣಮಪ್ಪ ಮಾದರ(೫೧) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ.

ಆರೋಪಿಯ ವಿವಿಧ ಭಂಗಿ…
ಆರೋಪಿಫಕೀರಪ್ಪ ಹಣಮಪ್ಪ ಮಾದರನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಕಳೆದ ಆರು ತಿಂಗಳಿನಿಂದ ಜೋಕಟ್ಟೆ ಪ್ರದೇಶದಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು.

ಕೊಲೆಗೀಡಾದ ಬಾಲಕಿಯ ಚಿಕ್ಕಪ್ಪನಿಗೂ ಆರೋಪಿ ಫಕೀರಪ್ಪಗೆ ಪರಿಚಯ ಇದ್ದುದರಿಂದಲೇ ಆತ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಆಗಸ್ಟ್ 6 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ ಧಿಕ್ಕರಿಸಿದ ಫಕೀರಪ್ಪ ಆಕೆಯನ್ನು ಕೊಲೆ ಮಾಡಿದ್ದಾನೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ಧಾರ್ಥ್ ಗೋಯಲ್, ಡಿಸಿಪಿ (ಅಪರಾಧ ಮತ್ತು ಸಂಚಾರ) ಬಿ ಪಿ ದಿನೇಶ್ ಕುಮಾರ್, ಎಸಿಪಿ (ಉತ್ತರ ವಿಭಾಗ) ರವೀಶ್ ನಾಯಕ್ (ಪ್ರಭಾರಿ), ಎಸಿಪಿ ಅವರ ಮಾರ್ಗದರ್ಶನದಲ್ಲಿ ಪ್ರಕರಣವನ್ನು ತ್ವರಿತವಾಗಿ ಭೇದಿಸಲಾಯಿತು. (ಉತ್ತರ ಉಪವಿಭಾಗ) ಮನೋಜ್ ಕುಮಾರ್ ನಾಯಕ್. ತನಿಖಾ ತಂಡದಲ್ಲಿ ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀಕಲಾ ಕೆ ಟಿ, ಎಎಸ್ಐ ಕೃಷ್ಣ, ಹೆಡ್ ಕಾನ್ಸ್ಟೆಬಲ್ಗಳಾದ ಸತೀಶ್ ಎಂ ಆರ್ ಮತ್ತು ಸೈಯ್ಯದ್ ಇಂತಿಯಾಜ್, ಕಾನ್ಸ್ಟೆಬಲ್ಗಳಾದ ಶಶಿಕುಮಾರ್ ಮತ್ತು ರಾಕೇಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.





































