ಕರ್ನಾಟಕ : ಬಿಜೆಪಿ ಬಂಡಾಯ ಶಮನಕ್ಕೆ ಅಮಿತ್ ಶಾ ಬ್ರಹ್ಮಾಸ್ತ್ರ!

Picture of RB NEWS

RB NEWS

Bureau Report

ನವದೆಹಲಿ : ಶಿವಮೊಗ್ಗ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆಗೆ ಆಹ್ವಾನಿಸಿ ಕರೆ ಮಾಡಿದ್ದರೆಂದು ತಿಳಿದುಬಂದಿದೆ.

ಈ ಕುರಿತು ಸಕಾರಾತ್ಮಕವಾಗಿ ಒಪ್ಪಿಕೊಂಡಿರುವ ಈಶ್ವರಪ್ಪ ಅವರು ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಬೇಡಿಕೆ ಈಡೇರಿದರೆ ಮಾತ್ರ ಸ್ಪರ್ಧಾ ಕಣದಿಂದ ಹಿಂದೆ ಸರಿಯುವುದಾಗಿ ಆಪ್ತರ ಜತೆ ಈಶ್ವರಪ್ಪ ಮಾಹಿತಿ ಹಂಚಿಕೊಂಡಿದ್ದರೆನ್ನಲಾಗಿದೆ.

ಬೇಡಿಕೆ ಈಡೇರದೇ ಹೋದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಕರ್ನಾಟಕದ ರಾಜಕೀಯ ಸ್ಥಿತಿಗತಿಯನ್ನು ಅರಿತುಕೊಂಡು ಈ ನಿರ್ಧಾರಕ್ಕೆ ಬಂದಿದ್ದು, ಸದ್ಯ ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜತೆ ಸಭೆ ಬಂಡಾಯ ಶಮನಕ್ಕೆ ಅಂತಿಮ ಪ್ರಯತ್ನವನ್ನು ಖುದ್ದಾಗಿ ನಡೆಸಲಿದ್ದಾರೆ ಎಂಬ ಮಾಹಿತಿ ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿ ಹೆಬ್ಬಾಗಿಲು ಆಗಿದ್ದು , ಹೀಗಾಗಿ ಪ್ರತಿಯೊಂದು ಕ್ಷೇತ್ರವೂ ಅಮೂಲ್ಯವಾಗಿದೆ. ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳಿಸಲಿದೆ ಎಂಬ ಸಮೀಕ್ಷೆಯೂ ದೆಹಲಿ ಮಟ್ಟದ ಬಿಜೆಪಿ ಮುಖಂಡರಿಗೆ ನಿದ್ದೆ ಗೆಡಿಸುವಂತೆ ಮಾಡಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top