ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ

Picture of RB NEWS

RB NEWS

Bureau Report

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭವು ಫೆ. 2 ರಂದು ಬೆಳಿಗ್ಗೆ ಗಂಟೆ 8:00 ರಿಂದ ಕಡೇಶಿವಾಲಯ ಗ್ರಾಮದ ಪೆರ್ಲಾಪು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ಜರಗಲಿರುವುದು.

ಬೆಳಿಗ್ಗೆ 8 ಗಂಟೆ ಸರಿಯಾಗಿ ಶ್ರೀ ನಾರಾಯಣ ಗುರುಪೂಜಾ ಕಾರ್ಯಕ್ರಮವು ಸಂಘದ ಗೌರವಾಧ್ಯಕ್ಷ ಮೋಹನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿರುವುದು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಜೀಪ ಮುನ್ನೂರು ಮುರ್ತೆದಾರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ, ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸ್ಥಾಪಕ ಅಧ್ಯಕ್ಷ ಲೋಕೇಶ್ ಕೋಡಿಕೆರೆ, ಉಡುಪಿ ನಿರ್ಮಿತಿ ಕೇಂದ್ರದ ಪ್ರಭಾರ ಯೋಜನಾ ನಿರ್ದೇಶಕರಾದ ದಿವಾಕರ ಪೂಜಾರಿ, ಯುವವಾಹಿನಿ (ರಿ.)ಉಪ್ಪಿನಂಗಡಿ ಘಟಕದ ಮಹಿಳಾ ಸಂಘಟನಾ ನಿರ್ದೇಶಕಿ ವನಿತ ಕೃಷ್ಣಪ್ಪ ಪೂಜಾರಿ ಮೊದಲಾದವರು ಭಾಗವಹಿಸಲಿರುವರು.

ಅದೇ ಸಂದರ್ಭದಲ್ಲಿ ಸಮಾಜದ ಸಾಧಕರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ, ಹಾಗೂ ವಿವಿಧ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿರುವುದು ಎಂದು ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯದ ಪ್ರಧಾನ ಕಾರ್ಯದರ್ಶಿ ಯಶವಂತ್ ಸಾಲ್ಯಾನ್ ಪತ್ತು ಕೊಡಂಗೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top