ಬಿರು ಬಿಸಿಲಿನ ತಾಪದಿಂದ ಇಡೀ ಜಗತ್ತು ತತ್ತರ – ಸಚಿವ ಈಶ್ವರ ಬಿ ಖಂಡ್ರೆ

Picture of RB NEWS

RB NEWS

Bureau Report

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಆಲಂಪುರಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಸಿ ವಿತರಿಸಿ ಮಾತನಾಡಿ, ಅರಣ್ಯ ಇಲಾಖೆ ಮಾಡಬೇಕಾದ ಕಾರ್ಯವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದ್ದು, 50 ಲಕ್ಷ ಮಂದಿಯ ದೊಡ್ಡ ತಂಡ ಈ ಕಾರ್ಯದಲ್ಲಿ ತೊಡಗಿದೆ ಎಂದರು.

ಸಮಾರಂಭದಲ್ಲಿ ಪುತ್ತೂರು ನರಿಮೊಗರಿನ ಅವಿನಾಶ್ ಕೊಡಂಕಿರಿ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಪುರಸ್ಕರಿಸಿದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸರ್ಕಾರ ತಾಲೂಕಿಗೊಂದು ಸಸ್ಯೋದ್ಯಾನ ನಿರ್ಮಿಸುತ್ತಿದ್ದು, ಎಲ್ಲ ಊರಿನಲ್ಲೂ ಶುದ್ಧ ಗಾಳಿಗೆ ಒಂದು ನಿರ್ದಿಷ್ಟ ಸ್ಥಳ ಕಾಯ್ದಿರಿಸುತ್ತಿದೆ ಪ್ರಸ್ತುತ ಹವಾಮಾನ ಬದಲಾವಣೆ ಕುರಿತು ಚಿಂತನೆ ನಡೆಯಬೇಕಿದ್ದು, ಪರಿಸರ ಸಂರಕ್ಷಣಾ ಕೊರತೆಯಿಂದ ಭೂಮಿ ಸಮುದ್ರ ಪಾಲಾಗುತ್ತಿದೆ ಎಂದರು.

ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಲನ್, ಅರಣ್ಯ ಇಲಾಖೆ ಮಂಗಳೂರು ವೃತ್ತ ಸಿಸಿಎಫ್ ಡಾ. ವಿ.ಕರಿಕಾಲನ್, ಮಂಗಳೂರು ವಿಭಾಗ ಡಿಸಿಎಫ್ ಆಂಟೋನಿ ಮರಿಯಪ್ಪ ವೈ.ಕೆ., ಮಂಗಳೂರು ಉಪವಿಭಾಗ ಎಸಿಎಫ್ ಪಿ.ಶ್ರೀಧರ್, ವನ್ಯಜೀವಿ ವಿಭಾಗದ ಶಿವರಾಮ ಬಾಬು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ, ಕಾವಳಪಡೂರು ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ಕಾರಿಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರೊನಾಲ್ಡ್ ಡಿಸೋಜ, ಬಂಟ್ವಾಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಪ್ರಮುಖರಾದ ಶಾಂತಾರಾಮ ಪೈ, ಜಿನರಾಜ ಅರಿಗ, ಮನೋಜ್ ಮಿನೇಜಸ್ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಎಸ್.ಎಸ್.ಸ್ವಾಗತಿಸಿದರು. ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಿಸ್ ಪ್ರಶಸ್ತಿ ಪತ್ರ ವಾಚಿಸಿದರು. ಬಂಟ್ವಾಳ ಯೋಜನಾಧಿಕಾರಿ ಬಾಲಕೃಷ್ಣ ವಂದಿಸಿದರು. ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಪಿ.ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ನಂತರ ಅರಣ್ಯ ಸಚಿವ ಈಶ್ವರ ಖಂಡ್ರೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವೀಕ್ಷಿಸಿ, ಅಲ್ಲಿರುವ ವೃಕ್ಷಗಳ ಮಾಹಿತಿ ಪಡೆದರು. ಸಸ್ಯೋದ್ಯಾನಗಳಿಗೆ ಬರುವ ಮಕ್ಕಳಿಗೆ, ಜನರಿಗೆ ಕನಿಷ್ಠ 10 ಗಿಡ ಮರಗಳನ್ನು ಗುರುತಿಸುವಂತೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top