ಬೀದಿಬದಿಯ ಬಡ ವ್ಯಾಪಾರಸ್ಥರ ಮೇಲೆ ಹೆದ್ದಾರಿ ಪ್ರಾಧಿಕಾರದಿಂದ ದಬ್ಬಾಳಿಕೆಗೆ ತಕ್ಕ ಉತ್ತರ ನೀಡುವೆವು: ಬಿ.ಕೆ.ಇಮ್ತಿಯಾಜ್

Picture of RB NEWS

RB NEWS

Bureau Report

ಮಂಗಳೂರು: ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು,ಅವರ ಮೇಲೆ ಏಕಾಏಕಿ ಧಾಳಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ತೀರಾ ಖಂಡನೀಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಎಕರೆಗಟ್ಟಲೆ ಭೂಮಿಯನ್ನು ಕಬಳಿಸಿದ ಅತಿಕ್ರಮಣದಾರರ ವಿರುದ್ಧ ಎಳ್ಳಷ್ಟೂ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರ ಬಡಪಾಯಿಗಳ ಮೇಲೆ ಧಾಳಿ ನಡೆಸಿರುವುದು ಎಷ್ಟು ಸರಿ….? ಬೀದಿಬದಿ ವ್ಯಾಪಾರದ ಮೂಲಕ ಬದುಕು ಕಟ್ಟಿಕೊಂಡ ವ್ಯಾಪಾರಸ್ಥರ ಬದುಕನ್ನೇ ನಾಶ ಮಾಡಲು ಹೊರಟ ಹೆದ್ದಾರಿ ಪ್ರಾಧಿಕಾರದ ದುರಂಹಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದು ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಎಚ್ಚರಿಕೆ ನೀಡಿದರು.

ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.)ದ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ತಲಪಾಡಿ ವಲಯ ಸಮಾವೇಶವನ್ನು ಉದ್ಘಾಟಿಸುತ್ತಾ ಅವರು ಮಾತನಾಡಿದರು.

ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ನಮ್ಮ ಬದುಕನ್ನು ನಾಶ ಮಾಡಲು ಹೊರಟಿರುವವರಿಗೆ ನಾವು ಎಚ್ಚರಿಸಲು ಇಂದು ಸೇರಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅನ್ಯಾಯ ಮಾಡುತ್ತಾರೆ, ನಾವು ಯಾರಿಗೂ ತೊಂದರೆ ಮಾಡದೆ ಪ್ರಾಮಾಣಿಕವಾಗಿ ಬದುಕನ್ನು ನಿರ್ವಹಿಸುತ್ತಿದ್ದೇವೆ. ನಾವು ಬೀದಿಬದಿಯಲ್ಲಿ ಕೆಲಸ ಮಾಡದೆ ಹೋದರೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತಿತ್ತು,ನಾವು ನಿರುದ್ಯೋಗ ಪಟ್ಟಿಯಿಂದ ಹೊರಬಂದು ಬೀದಿಬದಿಯಲ್ಲಿ ವ್ಯಾಪಾರ ಮಾಡಿ ಇಂದು ನಮ್ಮ ಸಂಸಾರದ ಕನಿಷ್ಟ ನಾಲ್ಕು ಜನರ ಬದುಕನ್ನು ನಡೆಸುತ್ತಿದ್ದೇವೆ ಆದರೂ ಕಷ್ಟದಲ್ಲಿ ಕೆಲಸಮಾಡುವ ಬೀದಿಬದಿ ವ್ಯಾಪಾರಿಗಳ ಮೇಲೆ ಇವರು ಸವಾರಿ ಮಾಡುತ್ತಿದ್ದಾರೆ ಎಂದರು.

ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಸುರೇಖಾ ಚಂದ್ರಹಾಸ್ ಮಾತನಾಡಿ ಬದುಕನ್ನು ಹತ್ತಿಕ್ಕುವವರ ವಿರುದ್ಧ ಹೋರಾಟ ಮಾಡುವುದು ನಮ್ಮ ಹಕ್ಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸುಪ್ರೀಮ್ ಕೋರ್ಟ್ ಆದೇಶವನ್ನು ಕೈಯಲ್ಲಿ ಹಿಡಿದು ಬಡವರ ಹಕ್ಕನ್ನು ಕಸಿಯುತ್ತಿದ್ದಾರೆ. ಈಗಲಾದರೂ ನಾವು ಎಚ್ಚೆತ್ತು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಸ್ವಾಗತಿಸಿದರು.
ಸೃಜನ್ ನಿರೂಪಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top