ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊoಡು ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇಮ್ರಾನ್ ಸುರ್ಮೋ ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್‌ಗಳಿದ್ದರೂ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಹಾಕಿಕೊಂಡು ಓಡಾಡುತ್ತಿದ್ದನು.