
ಬೆಳುವಾಯಿಯಲ್ಲಿ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ
ಮೂಡುಬಿದ್ರೆ: ಇಲ್ಲಿಗೆ ಸಮೀಪದ ಬೆಳುವಾಯಿ ಮರಿಯಂ ನಿಕೇತನ್ ಶಾಲೆಯಲ್ಲಿ ಆಗಸ್ಟ್ ಆರರಂದು ಮೂಡುಬಿದಿರೆ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದ್ರೆ ವಲಯ ಹಾಗೂ ಮರಿಯಮ್ ನಿಕೇತನ್ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 156 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೂಡುಬಿದಿರೆಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಎಚ್ಎಸ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪುತ್ರನ್, ಬೆಳುವಾಯಿ ಪಂಚಾಯತ್ ಅಧ್ಯಕ್ಷ ಸುರೇಶ್ ಹಾಗೂ ಮರಿಯಂ ನಿಕೇತನ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಸಿಂತಾ ಲಸ್ರಾದೋ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




































