ಬೆಳ್ತಂಗಡಿ: ವಿದ್ಯುತ್ ಶಾಕ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂಟ್ವಾಳ ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ. ಪದ್ಮುಂಜದಲ್ಲಿರುವ ಮರದ ಮಿಲ್ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗೆ ಬೆಳ್ತಂಗಡಿ ಆಸ್ಪತ್ರೆಗೆ ಕರೆದೊಯ್ದರಾದರೂ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ವಿದ್ಯುತ್ಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.