“ಭಜರಂಗಿ” ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ

Picture of RB NEWS

RB NEWS

Bureau Report

“ಭಜರಂಗಿ” ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು (ಅ.10) ಹಾಜರಾಗಿದ್ದು, ನ್ಯಾಯಾಲಯವು ಆರೋಪಿಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ ಕೊಳತ್ತಮಜಲು ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣದಲ್ಲಿಯೂ ಭರತ್‌ ಕುಮ್ಡೇಲ್‌ನನ್ನು ಪ್ರಮುಖ ಆರೋಪಿ ಎಂದು ಪೊಲೀಸರು ಹೆಸರಿಸಿದ್ದು, ಇತ್ತೀಚೆಗೆ ಪ್ರಕರಣದ ಆರೋಪಿಗಳ ವಿರುದ್ಧ ಕೋಕಾ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ವಾರಂಟ್‌ ಹಾಗೂ ಕೋಕಾ ಪ್ರಕರಣದಿಂದ ಬಚಾವಾಗಲು ಕುಮ್ಡೇಲ್‌ ನ್ಯಾಯಾಲಯಕ್ಕೆ ಶರಣಾಗಿರಬಹುದೆಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭಿಸಿದೆ.

ಭರತ್ ಕುಮ್ಡೇಲು ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 169/2017ರಂತೆ ಕಲಂಗಳು 143, 147, 148, 447, 448, 302, 120(ಬಿ), 201 ಹಾಗೂ 149 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.

ಇದೇ ವೇಳೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 54/2025, ಕಲಂಗಳು 103, 109, 118(1), 190, 191(1), 118(2), 191(2), 191(3) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಎ-1 ಆರೋಪಿಯಾಗಿರುವ ಭರತ್ ಕುಮ್ಡೇಲು ಪ್ರಕರಣ ದಾಖಲಾಗಿದ್ದ ದಿನದಿಂದಲೇ ತಲೆಮರೆಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top