ಭಾರೀ ಸಂಚಲನ ಉಂಟು ಮಾಡುತ್ತಿದೆ ಅಮಾವಾಸ್ಯೆಬೈಲ್ ಪೆನ್ ಡ್ರೈವ್ -ತಲೆಮರೆಸಿಕೊಂಡ ಆರೋಪಿ ಉದ್ಯಮಿ ಶ್ರೇಯಸ್ ನಾಯ್ಕ್
ಉಡುಪಿ: ಹಾಸನದ ಪೆನ್ ಡ್ರೈವ್ ಪ್ರಕರಣ ದೇಶದಲ್ಲಿ ಭಾರಿ ಸಂಚಾಲವನ್ನೇ ಮೂಡಿಸಿತ್ತು. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯ ಅಮಾವಾಸ್ಯೆಬೈಲು ನಡೆದಿದೆ.
ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬಾತ ಆರೋಪಿಯಾಗಿದ್ದು, ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.
ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.
ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಶ್ರೇಯಸ್ ನಾಪತ್ತೆಯಾಗಿದ್ದಾನೆ .ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.






























