ಮಂಗಳೂರು:ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ(೫೨) ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ.
ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದಿಂದ ಹುಡುಕಾಟ ನಡೆಸುತ್ತಿದೆ.
ಬೆಳಗ್ಗೆ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು ಬೆಳಗ್ಗೆ ೫ ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ.


ಸಹೋದರ ನಾಪತ್ತೆಯಾಗಿರುವ ವಿಚಾರ ತಿಳಿದು ಘಟನಾ ಸ್ಥಳದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ ಮೊಯಿದ್ದೀನ್ ಬಾವ
ಡ್ಯಾಮೇಜ್ ಆದ ಸ್ಥಿತಿಯಲ್ಲಿ ಮುಮ್ತಾಜ್ ಅವರ ಬಿಎಂಡಬ್ಲೂ ಕಾರು ಪತ್ತೆಯಾಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.ಶೇರ್
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದಾರೆ.





































