ಮಂಗಳೂರು ಮೂಲದ ಖೈದಿಗಳಿಂದ ಕಾರವಾರ ಜೈಲ್ ನಲ್ಲಿ ದಾಂಧಲೆ

Picture of RB NEWS

RB NEWS

Bureau Report

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ ಪೊಲೀಸರು ತಕ್ಷಣ ಜೈಲಿಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಕಾರವಾರ ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾಗಿದ್ದರು. ದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೆ 20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top