ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಮೂವರು ಆರೋಪಿಗಳ ಸೆರೆ

Picture of RB NEWS

RB NEWS

Bureau Report


ಮಂಗಳೂರು : ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು.

  1. ಮಸೂದ್ ಎಂಕೆ ಪ್ರಾಯ: 45 ವರ್ಷ ತಂದೆ: ದಿ. ಖಾಲೀದ್ ಹಾಜಿ, ವಾಸ: ಮೊಗರು ಹೌಸ್, ಆಡೂರು, ಉರ್ದೂರು ಪೋಸ್ಟ್ ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ
  2. ಹೆಸರು ಮೊಹಮ್ಮದ್ ಆಶಿಕ್ ಪ್ರಾಯ: 24 ವರ್ಷ ತಂದೆ: ದಿ. ಎಮ್ ಪಿ ಅಬ್ದುಲ್ಲಾ ವಾಸ: ಚೆಂದಮೂಲ ಹೌಸ್, ಪರಪ್ಪ ದೇಲಂಪಾಡಿ ಪರಪ್ಪ ಪೋಸ್ಟ್, ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ
  3. ಸುಬೇರ್ ಪ್ರಾಯ: 30 ವರ್ಷ ತಂದೆ: ಇಬ್ರಾಹಿಂ ವಾಸ: ಪರಪ್ಪ ದೇಲಂಪಾಡಿ ಪರಪ್ಪ ಪೋಸ್ಟ್, ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top