ಬಂಟ್ವಾಳ : ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿ, ಸಂಸ್ಕಾರಯುತ ಬದುಕು ಕಲಿಸುವಲ್ಲಿ ತಾಯಿಯ ಪಾತ್ರ ಮಹತ್ವವಾದುದಾಗಿದೆ. ಭಾರತೀಯ ಪರಂಪರೆ, ಸಂಸ್ಕಾರ,ಸಂಸ್ಕೃತಿಗಳು ಉಳಿಸಿ ಬೆಳೆಸುವಲ್ಲಿ ಮಹಿಳೆ ಕೊಡುಗೆ ಅಪಾರವಾಗಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು.
ಮಾಚ್೯ 8ರಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.





ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ಕೊಂಕಣಪದವು ಅಧ್ಯಕ್ಷತೆ ವಹಿಸಿದ್ದರು..
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿ ಯ ಮಹಿಳಾ ಅಧ್ಯಕ್ಷೆ ಹರಿನಾಕ್ಷಿ ಮುರುವ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ,ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿ ಇದರ ಅಧ್ಯಕ್ಷ ಸುರೇಶ್ ಸೂರ್ಯ,ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕಿ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ "ಸ್ವಸ್ಥ ಮಹಿಳೆ- ಸ್ವಸ್ಥ ಮನೆ" ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್,ಮಹಿಳೆಯರಿಗೆ ಆಗುವ ಅರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡಿ,ಮಹಿಳೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು. "ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ "ಎಂಬ ವಿಷಯದ ಬಗ್ಗೆ ವಕೀಲರು, ನೋಟರಿ ಆದ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿ ಕಾನೂನನ್ನು ದುರುಪಯೋಗ ವಾಗದೆ ಸದುಪಯೋಗ ಪಡೆದುಕೊಳ್ಳಬೇಕು, ನಮ್ಮನ್ನು ಮೊದಲು ನಾವು ಅರ್ಥ ಮಾಡಿಕೊಳ್ಳಬೇಕು,ಸಂಸ್ಕಾರ ಯುಕ್ತವಾಗಿ ಜೀವನ ಸಾಗಿಸಿದರೆ ಯಾವ ಕಾನೂನಿನ ರಕ್ಷಣೆ ಅಗತ್ಯವಿಲ್ಲ ವೆಂದರು. ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರುಗಳನ್ನು, ಮಾಜಿ ಅಧ್ಯಕ್ಷರುಗಳನ್ನು, ಪಂಚಾಯತ್ ಸದಸ್ಯೆರುಗಳನ್ನು ಅಭಿನಂದಿಸಾಲಾಯಿತು,
ಸಂಘದ ಸದಸ್ಯೆ ಭಾರತೀ ಪ್ರಾರ್ಥಿಸಿ,ಯುವ ವಾಹಿನಿ(ರಿ.) ಮಾಣಿ ಘಟಕದ ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿದರು. ,ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ಪ್ರಸ್ತಾವಿಕ ಮಾಡಿದರು. ಸದಸ್ಯೆ ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ಘಟಕದ ಸದಸ್ಯ ರಾಜೇಶ್ ಬಲ್ಯ






































