ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ) ಕಾರ್ಕಳ ಮತ್ತು ಗ್ರಾಮ ಪಂಚಾಯತ್ ನಿಟ್ಟೆ – ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ನಿಷೇಧ ದಿನದ ಅಂಗವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮವು ನಿಟ್ಟೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಕಾರ್ಕಳ ವಕೀಲರ ಸಂಘ (ರಿ)ದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಸಮಾರಂಭವನ್ನು ಉದ್ಘಾಟಿಸಿದ ಮಾತನಾಡಿ, ಕೈಗಾರಿಕಾ ಕ್ರಾಂತಿಯ ಸಮಯದಲ್ಲಿ ವಿವಿಧ ರೀತಿ ಮಕ್ಕಳನ್ನು ದುಡಿಸುತ್ತಿದ್ದರು. ನಂತರದ ದಿನಗಳಲ್ಲಿ ಕಾನೂನುಗಳಿಂದ ಆಗಿರುವ ಬದಲಾವಣೆಗಳ ಕುರಿತು ಅಗತ್ಯ ಮಾಹಿತಿ ನೀಡಿದರು.
ಪ್ರತಿಯೊಬ್ಬ ನಾಗರಿಕನು ಲೋಕ ಆದಾಲತ್ನ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ನಿಟ್ಟೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ನಿತಿನ್ ಸಾಲಿಯಾನ್ ನಿಟ್ಟೆ, ಬಾಲಕಾರ್ಮಿಕರನ್ನು ನಿಷೇಧಿಸಿದ ಕೆಲಸಗಳಲ್ಲಿ ತೊಡಗಿಸಬಾರದೆಂದು ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಥಿ ನಿಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ ವರ್ತಿ ಮಾತನಾಡಿ ಬಾಲಕಾರ್ಮಿಕರನ್ನು ಯಾರಾದರೂ ದುಡಿಸುತ್ತಿದ್ದರೆ ಕೂಡಲೇ ಗ್ರಾಮ ಪಂಚಾಯತ್ಗೆ ತಿಳಿಸಬೇಕೆಂದು ವಿನಂತಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನ್ಯಾಯವಾದಿ ಶ ಪರಿತೋಷ ಡಿ ಜೈನ್ ಮಾತನಾಡಿ, ಬಾಲಕಾರ್ಮಿಕರ ನಿಷೇಧದ ಬಗ್ಗೆ ಇರುವ ಕಾನೂನುಗಳ ಸಂಪೂರ್ಣ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಬಾಲಕಾರ್ಮಿಕರ ಪದ್ಧತಿಯನ್ನು ಸಂಪೂರ್ಣವಾಗಿ ನಮ್ಮ ಗ್ರಾಮದಲ್ಲಿ ನಿಷೇಧಿಸಬೇಕೆಂದು ಕರೆ ನೀಡಿದರು.
ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2024” ಪ್ರಮಾಣ ವಚನ



ಕಾರ್ಕಳ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2024” ಪ್ರಮಾಣ ವಚನವು ಕಾರ್ಕಳ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಜರುಗಿತು.
ಪ್ರಮಾಣ ವಚನ ಭೋದನೆಯನ್ನು ಆಸ್ಪತ್ರೆ ವೈದ್ಯಧಿಕಾರಿ ಡಾ. ಶಶಿಕಲಾ ನೆರವೇರಿಸಿದರು.
ವೈದ್ಯರು, ನಸ್ ೯ಗಳು, ಸಿಬ್ಬಂದಿಯರು, ದಿನಗೂಲಿ ನೌಕರರು ಪ್ರಮಾಣ ಸ್ವೀಕರಿಸಿದರು.
ಪ್ರಮಾಣ ವಚನ…
ನಾನು ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ನಾನು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ನಾನು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಕಿಶೋರ ಹಾಗೂ ಕಾರ್ಮಿಕರ ಸೇವೆಯನ್ನು ಪಡೆಯುವುದಿಲ್ಲವೆಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನವಾದ ಇಂದು ಪ್ರಮಾಣ ಮಾಡುತ್ತೇನೆ.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುರೇಖಾ ಸ್ವಾಗತಿಸಿ, ವಂದನಾರ್ಪಣೆ ಗೈದು, ಕಾರ್ಯಕ್ರಮವನ್ನು ನಿರೂಪಿಸಿದರು.






































