ಮಗಳ ರೇಪ್ ಮಾಡಿಸಿದ್ದ ಬಿಜೆಪಿ ನಾಯಕಿ ಸೆರೆ
ಬಾಯ್‌ಫ್ರೆಂಡ್, ಆತನ ಸ್ನೇಹಿತನಿಂದ ರೇಪ್ ಮಾಡಿಸಿದ ಅಮ್ಮ! ಬಿಜೆಪಿಯಿಂದ ಅನಾಮಿಕಾ ವಜಾ
ಹರಿದ್ವಾರ: ಕೆಟ್ಟ ತಾಯಿ ಇರುವುದಿಲ್ಲ ಎಂಬ ಮಾತಿಗೆ ಅಪ ಚಾರವೆಂಬಂತೆ, ಉತ್ತರಾಖಂಡದ ಹರಿದ್ವಾರದಲ್ಲಿ ಬಿಜೆಪಿ ನಾಯಕಿ ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ.
ಹರಿದ್ವಾರದಬಿಜೆಪಿ ಮಹಿಳಾಮೋರ್ಚಾದ ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿರುವಾಕೆ. ಘಟನೆ ಸಂಬಂಧ ಅನಾ ಮಿಕಾ, ಆಕೆಯ ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಆಕೆಯನ್ನು ಪಕ್ಷದಿಂದ ಬಿಜೆಪಿ ವಜಾ ಮಾಡಿದೆ.
ಆಗಿದ್ದೇನು?:

ಅನಾಮಿಕಾ ಶರ್ಮಾ 2024ರವರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದಳು. ನಂತರ ಪಕ್ಷದ ಸದಸ್ಯೆ ಆಗಿ ಮುಂದುವರಿದಿದ್ದಳು. ಆಕೆ ತನ್ನ ಗಂಡನಿಂದ ಬೇರ್ಪಟ್ಟಿದ್ದಳು. ಆದರೆ ಮಗಳು ಅಪ್ಪನೊಂದಿಗೆ ಉಳಿದು ಕೊಂಡಿದ್ದಳು. ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು. ಈ ವೇಳೆ ಅನಾಮಿಕಾ, ಸುಮಿತ್ ನ ಪ್ರೇಮ ಸಂಪಾದಿಸಿ ಆತನ ಹೋಟೆಲ್ ನಲ್ಲಿಯೇ ಉಳಿದುಕೊಂಡಿದ್ದಳು. ಜನವರಿಯಿಂದ ಮಾರ್ಚ್ ವೇಳೆ ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಮಗಳ ಮೇಲೆಸುಮಿತ್ ಹಾಗೂ ಆತನ ಸ್ನೇಹಿತ ಶುಭಂನಿಂದ ಅತ್ಯಾಚಾರ ಮಾಡಿಸಿದ್ದಳು. ಜೊತೆಗೆ ಇದನ್ನು ತಂದೆಗೆ ಹೇಳದಂತೆ ಬೆದರಿ ಕೆಯೂ ಹಾಕಿದ್ದಳು.
ಮಂಗಳವಾರ ನಡೆದ ಘಟನೆ ಬಗ್ಗೆ ಅಪ್ರಾಪ್ತ ತನ್ನ ತಂದೆಗೆ ಮಾಹಿತಿ ನೀಡಿದ್ದಳು. ಪರಿಣಾಮ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೋಕೋಕಾಯ್ದೆ ಸೇರಿ ವಿವಿಧಸೆಕ್ಷನ್ ಅಡಿಯಲ್ಲಿ ಪ್ರಕರಣದಾಖಲಿಸಿದ್ದಾರೆ.





































