ಉಡುಪಿ : ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಉಡುಪಿ ನಗರ ಠಾಣೆ ಪೊಲೀಸರು ಮಜೀದ್, ಅಲ್ಪಾಜ್ ಶರೀಫ್ ನನ್ನು ಬಂಧಿಸಿದ್ದಾರೆ. ಹೊಡೆದಾಟದ ವೇಳೆ ಶರೀಫ್ ತೀವ್ರವಾಗಿ ಗಾಯಗೊಂಡಿದ್ದ. ಮೇ 19ರಂದು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಗ್ಯಾಂಗ್ ವಾರ್ ನಡೆದಿತ್ತು.ಅಡ್ಡಾಡಿದ್ದಿ ಕಾರು ಚಲಾಯಿಸಿ ಡಿಕ್ಕಿ ಹೊಡೆದು, ತಲವಾರು ಝಳಪಿಸಿ ಭಯ ಹುಟ್ಟಿಸಿದ್ದ ಪ್ರಕರಣ ಇದಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆಶಿಕ್, ರಖೀಬ್ ಹಾಗೂ ಸಕ್ಸೆನ್ ನನ್ನು ಬಂಧಿಸಿದ್ದರು. ಇದೀಗ ಮತ್ತೆ ಮೂವರನ್ನು ಬಂಧಿಸಿದ್ದು

ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವತಿದಿದೆ.
.






































