ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಗಣ್ಯರು ಇಂದು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.
ಜಯಪ್ರಕಾಶ್ ಹೆಗಡೆ ಕುಂದಾಪುರ ತಾಲೂಕಿನ ಕೊರ್ಗಿ ಶಾಲೆ, ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅವರು ನಿಟ್ಟೆ ಪದವು ಕಲಾಂಬಡಿ ಬೂತ್ ಸಂಖ್ಯೆ 140 – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನದಲ್ಲಿ ಭಾಗಿಯಾಗಲಿದ್ದಾರೆ.
ಅದೇ ಸಂದರ್ಭದಲ್ಲಿ ಅವರ ಪತ್ನಿ ಪ್ರಿಯಾಂಕ ಸುನೀಲ್ ಕುಮಾರ್ ಮತದಾನಗೈದಿದ್ದಾರೆ.







































