ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಕ್ರೇನ್

Picture of RB NEWS

RB NEWS

Bureau Report

ಮೂಡುಬಿದಿರೆ:  ಕಾರೊಂದಕ್ಕೆ ಡಿಕ್ಕಿ ಹೊಡೆದ ಕ್ರೇನ್ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಘಟನೆ  ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಎಂಬಲ್ಲಿ  ಸಂಭವಿಸಿದೆ.


ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಕಾರಿಗೆ ಡಿಕ್ಕಿ ಹೊಡೆದಿತ್ತು. ನಂತರದಲ್ಲಿ ರಸ್ತೆಯ ಒಂದು ಪಾಶ್ವ ೯ದಲ್ಲಿದ್ದ ಮನೆ ಮೇಲೆ ಬಿದ್ದಿದೆ.ಪರಿಣಾಮ ಮನೆ ಅಂಶಿಕ ಹಾನಿಗೊಳಗಾಗಿದೆ.
ಘಟನೆಯ ವೇಳೆಯಲ್ಲಿ ಮನೆ ಮಂದಿಗೆ ಯಾವುದೇ ರೀತಿಯಲ್ಲಿ ಗಾಯಗಳಾಗಿಲ್ಲ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top