ಮನೆಯ ಮೇಲೆ ಕುಸಿದು ಬಿದ್ದ ಆವರಣ ಗೋಡೆ :ನಾಲ್ವರು ದಾರುಣ ಮೃತ್ಯು

Picture of RB NEWS

RB NEWS

Bureau Report

ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top