



ಮಲೆಕುಡಿಯ ಸಮುದಾಯದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮನವಿ
ಮಲೆಕುಡಿಯ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದಿಂದ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ನವೆಂಬರ್ 13ರಂದು ಬೆಂಗಳೂರಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ ರವರನ್ನು ಮಲೆಕುಡಿಯ ಸಂಘದ ನಿಯೋಗವು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಿಯೋಗದಲ್ಲಿ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು, ರಾಜ್ಯ ಸಂಘಟನಾ ಕಾರ್ಯದರ್ಶಿ ನೋನಯ್ಯ ರೆಂಜಾಳ ,ಉಡುಪಿ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇದ್ದರು.
ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾರವರ 150ನೇ ಜಯಂತಿ
ಕಾರ್ಕಳ : ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ವತಿಯಿಂದ ಬುಡಕಟ್ಟು ಜನಾಂಗಗಳ ನಾಯಕ, ಭಾರತದ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾರವರ 150ನೇ ಜಯಂತಿ ಆಚರಣೆ ಹಾಗೂ ಭೂ ಸುಧಾರಣಾ ಕಾಯ್ದೆಗಳ ಕುರಿತು ಸಂವಾದ ಕಾರ್ಯಕ್ರಮವು ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಗ್ಗೆ 10.00 ಘಂಟೆಗೆ ಸಂಘದ ಕೇಂದ್ರ ಕಛೇರಿ ಕಾರ್ಕಳ ಮಾಳ ಪೇರಡ್ಕದಲ್ಲಿರುವ ಮಲೆಕುಡಿಯ ಸಮುದಾಯ ಭವನದಲ್ಲಿ ಜರಗಲಿದೆ.
ರಾಜ್ಯ ಮಲೆಕುಡಿಯ ಸಂಘ ಅಧ್ಯಕ್ಷರಾದ ಶ್ರೀಧರ ಗೌಡ ಈದು ಇವರು ಉದ್ಘಾಟಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಪೂರ್ವಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು, ಗೌರವ ಉಪಸ್ಥಿತಿಗಳಾಗಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಉಪಾಧ್ಯಕ್ಷೆ ಶೋಭಾ ಭಾಗವಹಿಸುವರು ಎಂದು ಸಂಘದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

































