ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿದ ರಾಮ್ ಸೇನಾ ಕರ್ನಾಟಕ ಕಾರ್ಯಕರ್ತರು

Picture of RB NEWS

RB NEWS

Bureau Report

ಮಂಗಳೂರು : ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ.

ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆ ಎಸ್‌ ಆರ್ ಟಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ.

ಸೆಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‌ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ.

ನಗರದಾದ್ಯಂತ ಇರುವ ಮಸಾಜ್ ಸೆಂಟರ್ ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ತೆರಳಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top