ಮಹಾಕಾಳಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ
ಕಾಞಂಗಾಡು: ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ವಾಣಿಯಂಪಾರೆ ಪ್ರದೇಶದಲ್ಲಿರುವ ಉದಯಗಿರಿ ಶ್ರೀ ಮಹಾಕಾಳಿ ದೇವಸ್ಥಾನದ ನೂತನ ಮಹಾದ್ವಾರವನ್ನು ಭಕ್ತರ ಸಮ್ಮುಖದಲ್ಲಿ ಲೋಕಾರ್ಪಣೆಗೈಯಲಾಯಿತು.
ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಈ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಮಹೋತ್ಸವದ ಅಂಗವಾಗಿ ಮಹಾದ್ವಾರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ವಿಧಿವಿಧಾನಗಳೊಂದಿಗೆ ಉದ್ಘಾಟಿಸಲಾಯಿತು.
ಕೋಟೆಯಾರ್ ಸಮಾಜದ ಬಂಧುಗಳು ತಮ್ಮ ಸಮುದಾಯದ ಸಹಕಾರದೊಂದಿಗೆ ಮಹಾದ್ವಾರವನ್ನು ನಿರ್ಮಿಸಿ ದೇವಸ್ಥಾನಕ್ಕೆ ಅರ್ಪಿಸಿರುವುದು ವಿಶೇಷವಾಗಿದೆ.
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಸಮಾಜದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.




























