ಮಹಾ ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸಚಿವರಿಗೆ ಶಾಸಕ ವಿ ಸುನಿಲ್ ಕುಮಾರ್ ಮನವಿ
RB NEWS
Bureau Report
ಮಹಾ ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸಚಿವರಿಗೆ ಶಾಸಕ ವಿ ಸುನಿಲ್ ಕುಮಾರ್ ಮನವಿ
ಕಾರ್ಕಳ : ಕಾರ್ಕಳದಲ್ಲಿ ಮುಂದಿನ ವರ್ಷ ಐತಿಹಾಸಿಕ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುತ್ತಾರೆ.
ಈ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಜೈನ ಬಸದಿಗಳು, ಕೆರೆಗಳು, ದೇವಸ್ಥಾನಗಳು, ಯಾತ್ರಿ ನಿವಾಸಗಳನ್ನು ಜೊತೆಗೆ ಅನೇಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಅವಶ್ಯಕತೆ ಇರುತ್ತದೆ.
ಈ ಹಿನ್ನೆಲೆಯಲ್ಲಿ ಕಾರ್ಕಳ ಪ್ರವಾಸೋಧ್ಯಮ ದೃಷ್ಟಿಯಲ್ಲಿ ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಅನುದಾನ ನೀಡುವಂತೆ ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವಿ ನೀಡಲಾಯಿತು. ಈ ಕುರಿತು ಶೀಘ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.