ಮಹಿಳಾ ಸಬಲೀಕರಣ ಕೋಶ ಪ್ರೇರಣಾ ಶಕ್ತಿ
ಕಾರ್ಕಳ: ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಕೋಶವನ್ನು ವಿಜೇತ ವಿಶೇಷ ಶಾಲೆಯ ಪ್ರಾಂಶುಪಾಲೆ ಡಾ. ಕಾಂತಿ ಹರೀಶ್ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮಹಿಳಾ ಸಬಲೀಕರಣ ಕೋಶವು ವಿದ್ಯಾರ್ಥಿಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಲು ಪ್ರೇರೇಪಿಸುತ್ತದೆ. ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುತ್ತದೆ. ಲೈಂಗಿಕ ಕಿರುಕುಳದ ವಿರುದ್ದ ಹೋರಾಡಲು ಅವರಿಗೆ ಮಾನಸಿಕ ಬೆಂಬಲವನ್ನು ನೀಡುತ್ತದೆ. ಈ ಕೋಶವು ವಿದ್ಯಾರ್ಥಿನಿಯರ ಮಾರ್ಗದರ್ಶನ ಮತ್ತು ಸಮಾಲೋಚನೆಗಾಗಿ ಉಪಕ್ರಮಗಳನ್ನು ತೆಗೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾ ನಾಯಕ್ ಮಾತನಾಡಿ ವಿದ್ಯಾರ್ಥಿನಿಯರಲ್ಲಿ ಆತ್ಮಗೌರವ, ಜ್ಞಾನವನ್ನು ಹೆಚ್ಚಿಸಲು ಹಾಗೂ ಲಿಂಗ ಸಮಾನತೆಯ ಬಗ್ಗೆ ಅರಿವು ಮೂಡಿಸಲು ಮತ್ತು ಅವರ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದರು.
ಮಹಿಳಾ ಸಬಲೀಕರಣ ಕೋಶದ ನಿರ್ದೇಶಕಿ, ಉಪನ್ಯಾಸಕಿ ಗೀತಾ. ಜಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಪವಿತ್ರ ನಿರೂಪಿಸಿದರು. ಸುರಕ್ಷಾ ಸ್ವಾಗತಿಸಿದರು. ಕು. ನಮಿತ ವಂದಿಸಿದರು.














