


ಮಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ಪಾತ್ರ ಮಹತ್ವದು -ನ್ಯಾಯಾಧೀಶೆ ಕೋಮಲ ಆರ್.ಸಿಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ಪಾತ್ರ ಮಹತ್ವದು -ನ್ಯಾಯಾಧೀಶೆ ಕೋಮಲ ಆರ್.ಸಿ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ಪಾತ್ರ ಮಹತ್ವದು -ನ್ಯಾಯಾಧೀಶೆ ಕೋಮಲ ಆರ್.ಸಿ
ಕಾರ್ಕಳ : ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ಮಹತ್ವ ಪಾತ್ರವಹಿಸುತ್ತದೆ. ಮಹಿಳೆಯರ ಸುರಕ್ಷಿತಾ ನಿಟ್ಟಿನಲ್ಲಿ ಕಾನೂನಿನಲ್ಲಿ ಕೆಲವೊಂದು ತಿದ್ದುಪಡಿ ತರಲಾಗಿದೆ ಎಂದು ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಕೋಮಲ ಆರ್.ಸಿ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬೈಲೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆಯ ಸಲುವಾಗಿ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ನ್ಯಾಯವಾದಿಗಳ ಸಂಘದ ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ನಡೆದರೆ, ವಿದ್ಯಾರ್ಥಿಗಳಾದರೆ ಶಾಲೆಯ ಮುಖ್ಯಸ್ಥರ, ಮನೆಯಲ್ಲಿ ಆದರೆ ಮನೆಯ ಹಿರಿಯರ ಇಲ್ಲವೇ ಪೊಲೀಸರ ಗಮನಕ್ಕೆ ತರಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನ್ಯಾಯವಾದಿ ಸದಾನಂದ ಸಾಲಿಯಾನ್, ಮಹಿಳೆಯರ ಮೇಲೆ ಹಿಂದಿನ ಕಾಲದಲ್ಲಿ ಬಹಳ ದೌರ್ಜನ್ಯವು ನಡೆಯುತ್ತಿತ್ತು. ಸಂವಿಧಾನದಲ್ಲಿ ನೀಡಿದ ಹಕ್ಕಿನಿಂದಾಗಿ ದೌರ್ಜನ್ಯ ಕಡಿಮೆಯಾಯಿತು. ಪ್ರಸ್ತುತ ಪೋಕ್ಸೋ ಕಾಯ್ದೆಯಿಂದ ದೌರ್ಜನ್ಯ ಒಳಗಾದವರು ತೆಗೆದುಕೊಳ್ಳಬೇಕಾದ ಕ್ರಮ ಮತ್ತು ದೌರ್ಜನ್ಯಕ್ಕೊಳಗಾದ ಅಪ್ರಾಪ್ತರು ಕಾನೂನಿನಿಂದ ರಕ್ಷಣೆ ಪಡೆಯಬಹುದಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ವಹಿಸಿದರು.
ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಗಳಾದ ಲಹರಿ ನಿರೂಪಿಸಿದರು. ಅಕ್ಷಿತಾ ವಂದನಾರ್ಪಣೆ ಗೈದರು.




































