ಮಾಜಿಶಾಸಕ ರಘಪತಿ ಭಟ್ ಗೆ ಬಿಜೆಪಿಯಿಂದ ನೋಟಿಸ್

Picture of RB NEWS

RB NEWS

Bureau Report

ಬೆಂಗಳೂರು: ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟನೆ ಕೇಳಿದೆ.

ರಾಜ್ಯ ಮಟ್ಟದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ ರಘುಪತಿ ಭಟ್‌ರಿಂದ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮಾಜಿ ಶಾಸಕ ರಘಪತಿ ಭಟ್ ಅವರ ನಿರ್ಧಾರ ಅಚಲವಾಗಿದ್ದು, ಶಿವಮೊಗ್ಗದ ಹೊಸನಗರ ತಾಲ್ಲೂಕಿನಲ್ಲಿರುವ ಶ್ರೀ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಗುರುವಾರ ಬೆಳಿಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಮಾತನಾಡಿ ಮಾಜಿಶಾಸಕ ರಘುಪತಿ ಭಟ್ ಅವರು 24 ಗಂಟೆಯೊಳಗೆ ರಾಜಕೀಯ ನಿವೃತ್ತಿ ಘೋಷಿಸಬೇಕು, ಇಲ್ಲದಿದ್ದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ಸಂದೇಶ ನೀಡಿರುವುದು ಗಮನಾರ್ಹವಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top