ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ
ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಞ ವೈದ್ಯೆ ಡಾ. ಹನಾ ಶೆಟ್ಟಿ ಉದ್ಘಾಟಿಸಿ, ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಒತ್ತಡಗಳ ಜೀವನ ಶೈಲಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ, ಇಂತ ಆರೋಗ್ಯ ಶಿಬಿರಗಳು ಈ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.



























