ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ವಸಂತ ಬಂಗೇರಾ ಅವರ ಆರೋಗ್ಯವು ಕಳೆದ ಕೆಲ ದಿನಗಳ ಹದಗೆಟ್ಟಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


























