ಬೆಂಗಳೂರು : ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರುಗಳಾದ ಸುಕುಮಾರ್ ಶೆಟ್ಟಿ, ಎಂ. ಪಿ. ಕುಮಾರಸ್ವಾಮಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.


ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಧ್ವಜವನ್ನು “ಹಸ್ತಾ” ೦ತರಿಸಿ ಪಕ್ಷಕ್ಕೆ ಆಹ್ವಾನಿಸಿದರು.. ಪರಮೇಶ್ವರ, ಮಧುಬಂಗಾರಪ್ಪ, ಬಿ.ಎಲ್.ಶಂಕರ್,
ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.





































