ಚಂಡೀಗಢ : ಮಹತ್ವದ ಬೆಳವಣಿಗೆ ಒಂದರಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದು ದಿನದ ಬಳಿಕ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಹರಿಯಾಣ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಖಟ್ಟರ್, ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ಇಂದಿನಿಂದ ಕರ್ನಾಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನಯಾಬ್ ಸಿಂಗ್ ಸೈನಿ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದ್ದು, ಇದರ ಬೆನ್ನಲ್ಲೇ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇತ್ತ ಮನೋಹರ್ ಲಾಲ್ ಖಟ್ಟರ್ ಅವರನ್ನು ಬಿಜೆಪಿ ಕರ್ನಾಲ್ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಬಿಜೆಪಿ ಸಂಜಯ್ ಭಾಟಿಯಾ ಪ್ರಸ್ತುತ ಹರಿಯಾಣ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.


























