ಮಾಡುಬಿದಿರೆ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ ಉದ್ಘಾಟನೆ-ಸಂಮಾನ

Picture of RB NEWS

RB NEWS

Bureau Report

ಮೂಡುಬಿದಿರೆ : ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ, ನೀರ್ಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ಖೋ-ಖೋ ಪಂಜಾಟವನ್ನು ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪ ಬೆಳಗಿ ಉದ್ಘಾಟಿಸಿದರು.

ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪುಸ್ತಕದ ತಿಳುವಳಿಕೆಯ ಕೊಟ್ಟಿಗೆ ಶಾರೀರಿಕ ಮತ್ತು ದೈಹಿಕ ಬೆಳವಣಿಗೆಯು ಅತ್ಯಗತ್ಯ. ಆದುದರಿಂದ ವಿವಿಧ ರೀತಿಯ ಪಂದ್ಯಾಟಗಳು ವಿವಿಧ ರೀತಿಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡುತ್ತದೆ. ಹೀಗಾಗಿ ಎಲ್ಲ ರೀತಿಯ ಪಂದ್ಯಾಟಗಳು ಶಾಲೆಗಳಲ್ಲಿ ನಡೆಯುವಂತಾಗಬೇಕು ಎಂದು ಹಾರೈಸಿದರು.

ವೇದಿಕೆಯಲ್ಲಿ ಕೆಎಂಎಫ್ ಮಂಗಳೂರಿನ ಅಧ್ಯಕ್ಷ ಸುಚರಿತ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ ಎಂ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳು, ಹಾಗೂ ಎಲ್ಲಾ ಶಿಕ್ಷಕರು ಹಾಜರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top