ಹೆಬ್ರಿ: ಹೆಬ್ರಿ ತಾಲೂಕಿನ ಮುನಿಯಾಲು ಪೇಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣದಲ್ಲಿ ತೀವ್ರ ತರದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಜಗದೀಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತೀವ್ರ ತರದಲ್ಲಿ ಗಾಯಗೊಂಡಿದ್ದ ಜಗದೀಶ್ ಹಾಗೂ ಮಹಿಳೆಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಜಗದೀಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.






































