ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು
ಬೆಂಗಳೂರು : ಬಿಜೆಪಿ ವಿರುದ್ಧ ಶೇ. 40 ಭ್ರಷ್ಟಾಚಾರದ ಆರೋಪ ಹಾಕಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಸರ್ಕಾರದ ವಿರುದ್ಧ ಶೇ .40 ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಶೇ. 40 ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.





































