ಮುತಾಲಿಕ್‌ ವಿರುದ್ಧ ಮಾನಹಾನಿಕರ ಹೇಳಿಕೆ : ಬಿಜೆಪಿ ಮುಖಂಡ ವಿ.ಸುನೀಲ್ ಕುಮಾ‌ರ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

Picture of RB NEWS

RB NEWS

Bureau Report

ಆರೋಪ ಸಂಬಂಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿ.ಸುನೀಲ್ ಕುಮಾ‌ರ್ ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ನ್ಯಾಯಪೀಠ ಹೇಳಿದ್ದೇನು?: ‘ಚುನಾವಣೆಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಏನು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ, ಅವುಗಳ ಅನುಷ್ಠಾನ ಮಾಡಿವೆಯೇ, ಮುಂದೆ ಏನು ಮಾಡಬೇಕು ಎಂಬುದು ಚರ್ಚಾ ವಿಷಯಗಳಾಗುವುದಿಲ್ಲ. ಬದಲಿಗೆ ಸ್ಪರ್ಧಿ – ಪ್ರತಿಸ್ಪರ್ಧಿ ನಡುವಿನ ಪರಸ್ಪರ ವಿರುದ್ದದ ಭಾಷಣದಿಂದ ಚುನಾವಣೆ ನಡೆಯುತ್ತಿವೆ. ಈ ರೀತಿಯ ರಾಜಕೀಯ ಕೆಸರೆರಚಾಟ ನಿಲ್ಲಬೇಕಾಗಿದೆ” ಎಂದು ಈ ವೇಳೆ ಪೀಠ ಮೌಖಿಕವಾಗಿ ನುಡಿಯಿತು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರ್ಜಿದಾರ ಸುನಿಲ್ ಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸುನಿಲ್‌ ಕುಮಾ‌ರ್ ಗೆಲುವು ಸಾಧಿಸಿದ್ದರು. ಚುನಾವಣಾ ಫಲಿತಾಂಶದ ನಂತರ 2023ರ ಮೇ 14ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸುನೀಲ್ ಕುಮಾ‌ರ್, ಪ್ರಮೋದ್ ಮುತಾಲಿಕ್ ವಿರುದ್ಧ ಹೇಳಿಕೆ ನೀಡಿದ್ದರು.

ಇದರಿಂದ, ಸುನೀಲ್ ಕುಮಾರ್ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ಪ್ರಮೋದ್ ಮುತಾಲಿಕ್‌, 2023ರ ಸೆಪ್ಟೆಂಬರ್ 7ರಂದು ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪ್ರಾಸಿಕ್ಯೂಷನ್‌ಗೆ ಮುಂದಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಸುನೀಲ್‌ ಕುಮಾ‌ರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top