ಮೂಡಬಿದ್ರೆ ಬಸ್ಸಿನಲ್ಲಿ ಅಸಭ್ಯ ವರ್ತನೆ : ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ದೂರು

Picture of RB NEWS

RB NEWS

Bureau Report

ಮೂಡುಬಿದಿರೆ : ಸಾಮಾಜಿಕ ಜಾಲತಾಣಗಳಲ್ಲಿ ಮೂಡಬಿದಿರೆ ಬಸ್ಸಿನಲ್ಲಿ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಹರಿದಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳುವಂತೆ ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷ ಸಂದೇಶ ಪಿ.ಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ.‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೋದ ದೃಶ್ಯಾವಳಿಯನ್ನು ಆಧರಿಸಿ ಪ್ರಕರಣದ ಆರೋಪಿಯನ್ನು ಪೊಲೀಸರು ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆ, ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಯಾ ಇತರರು ಯಾವುದೇ ರೀತಿಯಲ್ಲಿ ದೂರು ನೀಡದೇ ಇರುವ ಹಿನ್ನಲ್ಲೆಯಲ್ಲಿ ಆರೋಪಿಗೆ ಎಚ್ಚರಿಕೆ ನೀಡಿ ಬಿಟ್ಟುಕಳುಹಿಸಿದ್ದರು.

ಈ ನಡುವೆ ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಅವರು ಪ್ರಕಟಣೆ ಹೊರಡಿಸಿ ಆರೋಪಿಯ ವಿರುದ್ಧ ದೂರು ನೀಡುವವರು ಮೂಡುಬಿದಿರೆ ಠಾಣೆಗೆ ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಿದ್ದರು.

ಪ್ರಕರಣದ ಗಂಭೀರತೆ ಅರಿತ ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣ ವೇದಿಕೆ ಪದಾಧಿಕಾರಿಗಳು ಲಿಖಿತ ಮನವಿ ಸಲ್ಲಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿದ್ದಾರೆ.

ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ರಮಿತಾ, ಗೀತಾ, ರಂಜಿತಾ ಮನವಿ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top