ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ
RB NEWS
Bureau Report
ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ, ಮೂಡುಬಿದಿರೆ ತಾಲೂಕು (ಮಂಗಳೂರು ಜಿಲ್ಲೆ) ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ. ಮೂಡುಬಿದಿರೆಯ ಖ್ಯಾತ ನ್ಯಾಯವಾದಿ ಹಾಗೂ ವಾಗ್ಮಿ ಶ್ರೀ ಶರತ್ ಶೆಟ್ಟಿ ಅವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮೆರವಣಿಗೆ ಆಗಸ್ಟ್ 9ರ ಆದಿತ್ಯವಾರ ಸಂಜೆ 6:30 ಗಂಟೆಗೆ ಐತಿಹಾಸಿಕ ಸಾವಿರ ಕಂಬದ ಬಸದಿಯಿಂದ ಪ್ರಾರಂಭವಾಗಿ ಸಮಾಜ ಮಂದಿರದವರೆಗೆ ಸಾಗಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಹತ್ತಾರು ಭಜನಾ ತಂಡಗಳು, ಯುವ ಸಂಘಟನೆಗಳು, ಮಹಿಳೆಯರು, ಯುವಕರು ಹಾಗೂ ಹಿರಿಯರು ಭಾಗವಹಿಸಲಿದ್ದು, ಚೆಂಡೆ ವಾದನ, ನಾಸಿಕ್ ಬ್ಯಾಂಡ್ ಸೇರಿದಂತೆ ವಿವಿಧ ವಾದ್ಯಘೋಷಗಳೊಂದಿಗೆ ಮೆರವಣಿಗೆಗೆ ವಿಶೇಷ ಮೆರುಗು ನೀಡಲಾಗುತ್ತದೆ. ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಭಟ್ಟಾರಕ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಖ್ಯಾತ ನ್ಯಾಯವಾದಿ ಹಾಗೂ ಪ್ರಖರ ವಾಗ್ಮಿ ಪೃಥ್ವಿಶ್ ಧರ್ಮಸ್ಥಳ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ, ರುದ್ರಾಂಶ ಕನ್ಸ್ಟ್ರಕ್ಷನ್ಸ್ ಸಂಸ್ಥೆಯ ಮಾಲಕರಾದ ಯುವ ನಾಯಕ ಅಜಯ್ ದೀಕ್ಷಿತ್ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ನಾಡು, ನುಡಿ, ಧರ್ಮ ಹಾಗೂ ರಾಷ್ಟ್ರಭಕ್ತಿಯ ಸಂಕಲ್ಪವನ್ನು ಪ್ರತಿಬಿಂಬಿಸುವ ಈ ಪವಿತ್ರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಹಿಂದೂ ಜಾಗರಣ ವೇದಿಕೆಯ ಮೂಡುಬಿದಿರೆ ತಾಲೂಕು ಸಂಯೋಜಕ ಹರಿಶ್ಚಂದ್ರ ಕೆ.ಸಿ. ಹಾಗೂ ಸಹಸಂಯೋಜಕರು ಶರತ್ ಮಿಜಾರ್ ಮತ್ತು ಸಂತೋಷ್ ಕುಮಾರ್ ಬನ್ನಡ್ಕ ಮನವಿ ಮಾಡಿದ್ದಾರೆ.