ಮೂಡುಬಿದಿರೆ : 15 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ರಾಜ್ಯ ಸರಕಾರ ಅನುಮೋದನೆ

Picture of RB NEWS

RB NEWS

Bureau Report

ಮೂಡುಬಿದಿರೆ: ರಾಜ್ಯ ಸರಕಾರವು 4134 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ಇತರ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲಮಾಧ್ಯಮವನ್ನು ಪ್ರಾರಂಭಿಸಲು ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 115 ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿ ಆರಂಭಕ್ಕೆ ಅನುಮೋದನೆ ದೊರೆತಂತಾಗಿದೆ. ಅದರಂತೆ ಮೂಡುಬಿದಿರೆಯ 15 ಸರಕಾರಿ ಶಾಲೆಗಳಲ್ಲಿ ಇದರ ಸವಲತ್ತು‌ ವಿದ್ಯಾರ್ಥಿಗಳು ಪಡೆಯಬಹುದಾಗಿದೆ.

ಮಂಗಳೂರು ಉತ್ತರ 15, ಮಂಗಳೂರು ದಕ್ಷಿಣ 16
ಮೂಡುಬಿದಿರೆ 15, ಪುತ್ತೂರು 18, ಸುಳ್ಯ 15 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯಲು ರಾಜ್ಯ ಸರಕಾರದಿಂದ ಅನುಮೋದನೆ ಸಿಕ್ಕಿದೆ.

ಮೂಡುಬಿದಿರೆಯಲ್ಲಿ…

  • ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಜ್ಯೋತಿ ನಗರ
  • ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಾಂಟ್ರಾಡಿ
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇರುವೈಲು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಚ್ಚಮೊಗರು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ (ಉರ್ದು)
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಡೇಲು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾರೂರು ಹೊಸಂಗಡಿ
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೂಪಾಡಿಕಲ್ಲು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಬೆಟ್ಟು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಬಾಗಿಲು (ಉರ್ದು)
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕೊಣಾಜೆ
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವರ್ಣಬೆಟ್ಟು
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಣಪಿಲ
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ
    ಮೇಲಿನ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಗೊಳ್ಳಲಿದೆ ಎಂದು ಮೂಡುಬಿದಿರೆ- ಮೂಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top