ಮೂಲ್ಕಿ-ಮೂಡುಬಿದಿರೆ ಬಿ ಜೆ ಪಿ ಮಂಡಲದ ವಿಶೇಷ ಕಾರ್ಯಕಾರಣಿ ಹಾಗೂ ಅಭಿನಂದನಾ ಸಭೆ
ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಮುಲ್ಕಿ ಮೂಡುಬಿದಿರೆ ಭಾರತೀಯ ಜನತಾ ಪಾರ್ಟಿಯ ಮಂಡಲದ ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆ ಸೆಪ್ಟೆಂಬರ್ 1 ರಂದು ಜರುಗಿತು.
ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಜಯಂತ್ ಕೋಟ್ಯಾನ್, ಶಾಂತಿಪ್ರಸಾದ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಉಸ್ತುವಾರಿಗಳಾದ ಚಂದ್ರಶೇಖರ್ ರಾವ್, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ ಹಾಗೂ ಇತರ ಹಲವಾರು ಪ್ರಮುಖರು ಹಾಜರಿದ್ದರು.

ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಂಸದ ಶಾಸಕ ಉಮಾನಾಥ ಕೋಟ್ಯಾನ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಹಲವಾರು ಮಾಹಿತಿಗಳನ್ನು ನೀಡಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಪ್ರೇರೇಪಿಸಿದರು.

ನೂತನ ಸಂಸದರಾಗಿ ಆಯ್ಕೆಯಾದ ಬ್ರಿಜೇಶ್ ಚೌಟ ರನ್ನು ಸನ್ಮಾನಿಸಲಾಯಿತು.
ನೂತನ ಪುರಸಭಾ ಅಧ್ಯಕ್ಷರುಗಳನ್ನು ಉಪಾಧ್ಯಕ್ಷರುಗಳನ್ನು ಗೌರವಿಸಲಾಯಿತು.






































