ಮೂಡುಬಿದಿರೆ : ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ್ದು, ಹೀಗಾಗಿ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿಸಿ ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ ಕಿನ್ನಿಗೋಳಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಮೂಲ್ಕಿ -ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಪಕ್ಷದ ಧುರೀಣರು ಭಾಗವಹಿಸಿದರು.

































