ಮೂವರು ಕುಖ್ಯಾತಿಗಳು ಸಿಸಿಬಿ ಬಲೆಗೆ!

Picture of RB NEWS

RB NEWS

Bureau Report

ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಾದ ಉಳ್ಳಾಲದ  ಕಿಲಿರಿಯ ನಗರ, ಸೀ ಸೈಡ್, ಮುಕ್ಕಚರಿ ಮುಹಮ್ಮದ್ ಸಮೀರ್ ಅಲಿ (33) ಉಳ್ಳಾಲ ತಾಲೂಕು ಬೋಲಿಯಾರ್ ಕಾಫಿಕಾಡ್ ಹೌಸ್, ಜುಮ್ಮಾ ಮಸೀದಿಯ ಮೊಹಮ್ಮದ್ ಮನ್ಸೂರ್ (30) ಕೊಣಾಜೆ ಮಲಾರ ಗ್ರಾಮ ಚಾವಡಿ ಬಳಿ, ಬದ್ರಿಯಾ ನಗರದ ಮೊಹಮ್ಮದ್ ನೌಷದ್ (30)ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನುವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ 25,90,000 ರೂ. ಅಂದಾಜಿಸಲಾಗಿದೆ.  ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆಯಾಗಿದೆ.

ಆರೋಪಿಗಳ ಪೈಕಿ ಮುಹಮ್ಮದ್ ಸಮೀರ್ ಅಲಿ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಇಲ್ಯಾಸ್ ಕೊಲೆ ಪ್ರಕರಣ, ಫಳ್ನೀರ್ ನ ಶಾಪ್ ವೊಂದರಲ್ಲಿ ನಡೆದ ಶೂಟ್ಔಟ್ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಜೀವ ಬೆದರಿಕೆ ಪ್ರಕರಣ ಹೀಗೆ ಒಟ್ಟು 7 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ.

ಇನ್ನೋರ್ವ ಆರೋಪಿ ಮೊಹಮ್ಮದ್ ಮನ್ಸೂರ್ ವಿರುದ್ಧ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದರೋಡೆ, ಹಲ್ಲೆ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಫಳ್ನೀರ್ ಶೂಟ್ಔಟ್ ಪ್ರಕರಣ, ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿರುತ್ತಾನೆ.

ಆರೋಪಿ ಮೊಹಮ್ಮದ್ ನೌಷದ್ ಎಂಬಾತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಭಾಗಿರುತ್ತಾನೆ. ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ಭಾಗಿಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top