ಮೂವರು ಕ್ರಿಮಿನಲ್ ವಿರುದ್ಧ ಗೂಂಡಾ ಕಾಯಿದೆ

Picture of RB NEWS

RB NEWS

Bureau Report

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರು ಮೂವರು ಕ್ರಿಮಿನಲ್ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಉಳ್ಳಾಲ ಕೋಟೆಪುರದ ಮೊಹಮ್ಮದ್ ಕಬೀರ್ ಆಲಿಯಾಸ್ ಚಬ್ಬಿ (31), ಗುರುಪುರ ಮಠದಗುಡ್ಡೆಯ ನವಾಜ್(30) ಮತ್ತು ಶಕ್ತಿನಗರದ ಜಯ ಪ್ರಶಾಂತ್ (30) ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಮೊಹಮ್ಮದ್ ಕಬೀರ್ ಒಂದು ಕೊಲೆ ಪ್ರಕರಣ, 3 ಕೊಲೆಯತ್ನ ಪ್ರಕರಣ ಸೇರಿದಂತೆ 14 ಅಪರಾಧ ಪ್ರಕರಣಗಲ್ಲಿ ಭಾಗಿಯಾಗಿದ್ದ. ನವಾಜ್ ವಿರುದ್ಧ ಬಜಪೆ, ಕಾವೂರು, ಮಂಗಳೂರು ಗ್ರಾಮಾಂತರ, ಮಂಗಳೂರು ಪೂರ್ವ ಮತ್ತು ಬರ್ಕೆ ಠಾಣೆಗಳಲ್ಲಿ ಒಂದು ಕೊಲೆ, 1 ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ. ಜಯಪ್ರಶಾಂತ್ ವಿರುದ್ಧ 3 ಗಲಭೆ, 1ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top