
ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನ. 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಜರುಗಿತು.
ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪ್ರಾರ್ಥನಾ ಪೈ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕ್ರಿಸ್ಟಲ್ ಪ್ರಿಯಾ ಮೋನಿಸ್ ಇಂಗ್ಲಿಷ್ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ರಕ್ಷಿತಾ, ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಸುರಕ್ಷಾ,ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

































