ಕಾರ್ಕಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಪಳ್ಳಿ ಘಟಕ ಇದರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕ ಅರುಣ್ ಕುಮಾರ್ ನಿಟ್ಟೆ ಅವರ ಸಮಾಜ ಸೇವೆ ಹಾಗೂ ಭಾಗವತಿಕೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸುತ್ತಿರುವ ಶ್ರೀರಕ್ಷಾ ಹೆಗ್ಡೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿ, ಉದ್ಯಮಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, ಟ್ರಸ್ಟಿ, ಗೌರವಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.






































