ಯುವಕರು ಬದಲಾವಣೆಯ ಹರಿಕಾರರಾಗಲಿ: ಸಂಸದ ಬ್ರಿಜೇಶ್ ಚೌಟ

ಮೂಡುಬಿದಿರೆ: ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು.
ಅವರು ಸೋಮವಾರ ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು.
ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್ಸಿಸಿ, ಎನ್ಎಸ್ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಈ ಸಂಘಟನೆಗಳು ಸಾಮಾಜಿಕ ಜೀವನದ ನಿಜವಾದ ಅರ್ಥವನ್ನು ತಿಳಿಸಲು ನೆರವಾಗುತ್ತವೆ ಎಂದರು.
ಪ್ರಾಕೃತಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಮೃದ್ಧವಾಗಿರುವ ಮಂಗಳೂರನ್ನು ನವೀನತೆ ಮತ್ತು ಸಂಶೋಧನೆಯೊAದಿಗಿನ ಉದ್ಯಮಾಶೀಲಾ ಕೇಂದ್ರವನ್ನಾಗಿಸಲು ‘ಬೊಲ್ಪು ಪ್ಲ್ಯಾನ್’ ಸೇರಿ ಅನೇಕ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದೆ ಎಂದರು.



























