ಯೋಧರ ತ್ಯಾಗ–ದೇಶಪ್ರೇಮದ ಪ್ರತೀಕ: ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್

Picture of RB NEWS

RB NEWS

Bureau Report

ಮೂಡುಬಿದಿರೆಯಲ್ಲಿ ಯುದ್ಧ ಸ್ಮಾರಕಕ್ಕೆ ಶಿಲಾನ್ಯಾಸ


ಮೂಡುಬಿದಿರೆ: ಮೂಡುಬಿದಿರೆ ಕಡಲಕೆರೆ ಬಳಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಸಂಜೆ ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಶಿಲಾನ್ಯಾಸ ನೆರವೇರಿಸಿದರು. ಯುದ್ಧ ಸ್ಮಾರಕವು ಹುತಾತ್ಮ ಯೋಧರ ತ್ಯಾಗ ಹಾಗೂ ದೇಶಪ್ರೇಮದ ಜೀವಂತ ಪ್ರತೀಕವಾಗಿದ್ದು, ಸೈನಿಕರಿಗೆ ಸದಾ ಬೆಂಬಲ ನೀಡಬೇಕೆಂದು ಅವರು ಹೇಳಿದರು.
ಕರಾವಳಿ ಭಾಗದಿಂದ ಸೈನ್ಯಕ್ಕೆ ಸೇರುವ ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ಉಲ್ಲೇಖಿಸಿ, ಯುವಜನರಲ್ಲಿ ದೇಶಸೇವೆಯ ಮನೋಭಾವ ಬೆಳೆಸುವ ಅಗತ್ಯವಿದೆ ಎಂದರು.
ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಸ್ಮಾರಕದ ನೀಲನಕ್ಷೆ ಹಾಗೂ ಸ್ಟಾಂಪ್ ಬಿಡುಗಡೆಗೊಳಿಸಿದರು. ತಹಸೀಲ್ದಾರ್ ಶ್ರೀಧರ ಮುಂದಲಮುನಿ ಮತ್ತು ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ. ಅವರು ಸಂಬಂಧಿತ ದಾಖಲೆಗಳನ್ನು ಮಾಜಿ ಸೈನಿಕರ ಸಂಘಕ್ಕೆ ಹಸ್ತಾಂತರಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿವೇಕ್ ಆಳ್ವ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಜಯ್ ಫೆರ್ನಾಂಡೀಸ್ ಸ್ವಾಗತಿಸಿದರು. ವೇಣುಗೋಪಾಲ್ ಶೆಟ್ಟಿ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top